Skip to content
Salons10
NERA NUDI

NERA NUDI

Sindagi, Vijapur Health/Beauty

NERA NUDI digital media ISMILE SHEIKH

05/11/2026

ಬೆಳಗಾವಿ ಪೊಲೀಸರಿಂದ ಚುನ್ನಪ್ಪ ಪೂಜಾರಿ ವಶಕ್ಕೆ!

03/11/2026

ಸಿಂದಗಿ: ವಕೀಲರ ಮೇಲಿನ ಹಲ್ಲೆ ಖಂಡಿಸಿ ವಕೀಲರ ಸಂಘದಿಂದ ಬೃಹತ್ ಪ್ರತಿಭಟನೆ!

ವಕೀಲರ ರಕ್ಷಣಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಲು ಸರ್ಕಾರಕ್ಕೆ ಆಗ್ರಹ

ರಾಜ್ಯದಲ್ಲಿ ವಕೀಲರ ಮೇಲೆ ನಿರಂತರವಾಗಿ ನಡೆಯುತ್ತಿರುವ ಹಲ್ಲೆ, ದೌರ್ಜನ್ಯ ಹಾಗೂ ಕೊಲೆ ಪ್ರಕರಣಗಳನ್ನು ತೀವ್ರವಾಗಿ ಖಂಡಿಸಿ ಸಿಂದಗಿ ತಾಲೂಕು ವಕೀಲರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

03/11/2026

ಕಟಾವಿಗೆ ಬಂದ ಕಬ್ಬಿನ ಗದ್ದೆಗೆ ಬೆಂಕಿ: ಲಕ್ಷಾಂತರ ರೂ. ಮೌಲ್ಯದ ಬೆಳೆ ಭಸ್ಮ!

ಸಿಂದಗಿ: ತಾಲ್ಲೂಕಿನ ಚಿಕ್ಕಸಿಂದಗಿ ಗ್ರಾಮದ ಬಂದಾಳ ಸರ್ವೆ ನಂ. 73/1ರಲ್ಲಿ ಕಟಾವಿಗೆ ಸಿದ್ಧವಾಗಿದ್ದ 2 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿಯಾಗಿ ಸಂಪೂರ್ಣ ನಾಶವಾಗಿದೆ.

ಗ್ರಾಮದ ರೈತ ಕುಟುಂಬದ ಶ್ರೀಮತಿ ಕಲಾವತಿ ಚಂದ್ರಶೇಖರ ಜೋಗೂರ ಅವರಿಗೆ ಸೇರಿದ ಕಬ್ಬಿನ ಗದ್ದೆಗೆ ಬೆಂಕಿ ತಗುಲಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ.

ಈ ಕುರಿತು ರೈತ ಚಂದ್ರಶೇಖರ ಜೋಗೂರ ಮಾತನಾಡಿ, "ಸುಮಾರು 9 ತಿಂಗಳಿನಿಂದ ಕಷ್ಟಪಟ್ಟು ಬೆಳೆಸಿದ್ದ 2 ಎಕರೆ ಕಬ್ಬು ಕಟಾವಿಗೆ ಬಂದಿತ್ತು. ನಾನು ಊಟಕ್ಕೆಂದು ಮನೆಗೆ ಹೋಗಿ ಮರಳಿ ಬರುವಷ್ಟರಲ್ಲಿ ಕಬ್ಬಿನ ಗದ್ದೆಗೆ ಬೆಂಕಿ ತಗುಲಿರುವುದು ಕಂಡುಬಂತು. ತಕ್ಷಣ ಸುತ್ತಮುತ್ತಲಿನ ರೈತರನ್ನು ಕರೆದು ಬೆಂಕಿ ನಂದಿಸಲು ಪ್ರಯತ್ನಿಸಿದೆವು. ಆದರೆ ಬೆಂಕಿ ತೀವ್ರವಾಗಿ ಹರಡಿದ್ದರಿಂದ ಕಬ್ಬು ಸಂಪೂರ್ಣ ಸುಟ್ಟುಹೋಗಿದೆ" ಎಂದು ನೋವು ತೋಡಿಕೊಂಡರು.

ನಂತರ ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಲಾಗಿದ್ದು, ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ವಾಹನದೊಂದಿಗೆ ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ಸಂಭವಿಸದಂತೆ ತಡೆದಿದ್ದಾರೆ.

ಕಷ್ಟಪಟ್ಟು ಬೆಳೆದಿದ್ದ ಕಬ್ಬು ಕಟಾವಿನ ಹಂತದಲ್ಲಿ ಬೆಂಕಿಗೆ ಆಹುತಿಯಾಗಿರುವುದರಿಂದ ರೈತ ಕುಟುಂಬಕ್ಕೆ ಭಾರೀ ಆರ್ಥಿಕ ನಷ್ಟ ಉಂಟಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಬೆಳೆ ಹಾನಿ ಪರಿಶೀಲಿಸಿ ಸೂಕ್ತ ಪರಿಹಾರ ಒದಗಿಸಬೇಕೆಂದು ರೈತ ಕುಟುಂಬ ಆಗ್ರಹಿಸಿದೆ.

03/11/2026

ಹಿಂಡಲಗಾ ಜೈಲು ಚಲೋ ಚಳವಳಿಯಲ್ಲಿ ಸಿಂದಗಿ ತಾಲೂಕಿನ ರೈತರ ಭಾಗಿ!

ಬೆಳಗಾವಿ: ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹದ ಮುಂದೆ ನಡೆದ 'ಜೈಲು ಚಲೋ' ಚಳವಳಿಯಲ್ಲಿ ಸಿಂದಗಿ ತಾಲೂಕಿನ ರೈತರು ಭಾಗವಹಿಸಿ ಹೋರಾಟಕ್ಕೆ ಬೆಂಬಲ ಸೂಚಿಸಿದರು.

ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಲೆ ನಿಗದಿಪಡಿಸಬೇಕು ಎಂಬ ಪ್ರಮುಖ ಬೇಡಿಕೆಯೊಂದಿಗೆ ರೈತರು ಹೋರಾಟ ತೀವ್ರಗೊಳಿಸಿದ್ದಾರೆ. ಸರ್ಕಾರ ರೈತರ ಬೇಡಿಕೆಗಳಿಗೆ ಸ್ಪಂದಿಸಬೇಕು ಎಂದು ಆಗ್ರಹಿಸಿ ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡರು.

ರೈತರ ನ್ಯಾಯಯುತ ಬೇಡಿಕೆ ಈಡೇರುವವರೆಗೂ ಹೋರಾಟ ಮುಂದುವರಿಸುವ ಎಚ್ಚರಿಕೆಯನ್ನು ರೈತ ಮುಖಂಡರು ನೀಡಿದ್ದಾರೆ.

02/11/2026

ರಾಷ್ಟ್ರಮಟ್ಟದ ಸೈಕ್ಲಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಸಿಂದಗಿ ಯುವಕನಿಗೆ ಚಿನ್ನದ ಪದಕ!

ಗೋರವಗುಂಡಗಿ ಗ್ರಾಮದ ಪುನೀತ್ ಬಿರಾದಾರ್‌ಗೆ ರಾಷ್ಟ್ರಮಟ್ಟದಲ್ಲಿ ಪ್ರಥಮ ಸ್ಥಾನ; ಗ್ರಾಮಕ್ಕೆ ಕೀರ್ತಿ ತಂದ ಯುವ ಪ್ರತಿಭೆ.

ಸಿಂದಗಿ: ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಗೋರವಗುಂಡಗಿ ಗ್ರಾಮದ ಪುನೀತ್ ಸಂ. ಬಿರಾದಾರ್ ಅವರು ಜಾರ್ಖಂಡ್ ರಾಜ್ಯದ ರಾಜಧಾನಿ ರಾಂಚಿಯಲ್ಲಿ ನಡೆದ 2026ರ ರಾಷ್ಟ್ರಮಟ್ಟದ ಟ್ರ್ಯಾಕ್ ಸೈಕ್ಲಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಗೆದ್ದಿದ್ದಾರೆ.

ದೇಶದ ವಿವಿಧ ರಾಜ್ಯಗಳ ಸ್ಪರ್ಧಿಗಳು ಭಾಗವಹಿಸಿದ್ದ ಈ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಪುನೀತ್ ಅವರು ಅತ್ಯುತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನ ತಮ್ಮದಾಗಿಸಿಕೊಂಡಿದ್ದಾರೆ.

ತಮ್ಮ ಕ್ರೀಡಾ ಸಾಧನೆಯ ಮೂಲಕ ಗೋರವಗುಂಡಗಿ ಗ್ರಾಮ ಮಾತ್ರವಲ್ಲದೆ ಸಿಂದಗಿ ತಾಲೂಕು ಹಾಗೂ ವಿಜಯಪುರ ಜಿಲ್ಲೆಗೆ ಹೆಮ್ಮೆ ತಂದಿದ್ದಾರೆ.

ಪುನೀತ್ ಅವರ ಈ ಸಾಧನೆಗೆ ಗ್ರಾಮಸ್ಥರು, ಕ್ರೀಡಾಭಿಮಾನಿಗಳು ಹಾಗೂ ಹಿತೈಷಿಗಳು ಅಭಿನಂದನೆ ಸಲ್ಲಿಸಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಉನ್ನತ ಸಾಧನೆ ಮಾಡಲಿ ಎಂದು ಶುಭ ಹಾರೈಸಿದ್ದಾರೆ.

01/11/2026

ಸಿಂದಗಿ: ೭೧ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಆಯೋಜಿಸಲಾದ ಸಮಾರಂಭವನ್ನು ಉದ್ದೇಶಿಸಿ ಕರ್ನಾಟಕ ಸಾಹಿತ್ಯ ಪರಿಷತ್ ಸಿಂದಗಿ ಘಟಕದ ಮಾನ್ಯ ಅಧ್ಯಕ್ಷರಾದ ಶ್ರೀ ವೈ.ಸಿ. ಮಯೂರ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಕನ್ನಡ ನಾಡು, ನುಡಿ, ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಮಹತ್ವವನ್ನು ತಿಳಿಸುತ್ತಾ, ಕನ್ನಡ ಭಾಷೆಯ ಉಳಿವು ಮತ್ತು ಬೆಳವಣಿಗೆಗೆ ಪ್ರತಿಯೊಬ್ಬ ಕನ್ನಡಿಗರೂ ಶ್ರಮಿಸಬೇಕು ಎಂದು ಕರೆ ನೀಡಿದರು.

#ಕನ್ನಡರಾಜ್ಯೋತ್ಸವದ

01/11/2026

ನೇರ ನುಡಿ ಸುದ್ದಿ ವಾಹಿನಿಯ ತಂಡದ ವತಿಯಿಂದ ಎಲ್ಲರಿಗೂ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು.

#ಕನ್ನಡರಾಜ್ಯೋತ್ಸವದ #ಕರ್ನಾಟಕ

31/10/2026

ಕಬ್ಬಿಗೆ ₹5,500 ಬೆಂಬಲ ಬೆಲೆಗೆ ಆಗ್ರಹಿಸಿ ಜೇರಟಗಿಯಲ್ಲಿ ರೈತರ ಬೃಹತ್ ಪ್ರತಿಭಟನೆ: ರಾಜ್ಯ ಹೆದ್ದಾರಿ ತಡೆದು ಆಕ್ರೋಶ!

ಜೇರಟಗಿ: ಕಬ್ಬು ಬೆಳೆಗೆ ಪ್ರತಿ ಟನ್‌ಗೆ ₹5,500 ಬೆಂಬಲ ಬೆಲೆ ಘೋಷಿಸುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕರೆ ನೀಡಿದ್ದ ಕರ್ನಾಟಕ ಬಂದ್‌ಗೆ ಜೇರಟಗಿ ಗ್ರಾಮದಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಯಿತು.

ಕಬ್ಬು ಬೆಳೆಗಾರರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜೇರಟಗಿ ಗ್ರಾಮದಲ್ಲಿ ರೈತರು ರಾಜ್ಯ ಹೆದ್ದಾರಿಯನ್ನು ತಡೆದು ಬೃಹತ್ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಗ್ರಾಮದ ಸುತ್ತಮುತ್ತಲಿನ ಸಾವಿರಾರು ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಸಾಮಾಜಿಕ ಕಾರ್ಯಕರ್ತರಾದ ಆನಂದ ದೇಸಾಯಿ ಹಾಗೂ ಚನ್ನಯ್ಯ ವಸ್ತ್ರದ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ರೈತರು ಒಗ್ಗಟ್ಟಿನಿಂದ ಪಾಲ್ಗೊಂಡು ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು.

ಕಬ್ಬು ಬೆಳೆಗಾರರ ಹಿತ ಕಾಪಾಡಲು ಸರ್ಕಾರ ಕೂಡಲೇ ಸ್ಪಂದಿಸಿ ಪ್ರತಿ ಟನ್‌ಗೆ ₹5,500 ಬೆಂಬಲ ಬೆಲೆ ಘೋಷಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

#ಜೇರಟಗಿ #ರೈತರಪ್ರತಿಭಟನೆ #ಕಬ್ಬಿನಬೆಲೆ #ಕಬ್ಬುಬೆಳೆಗಾರರು #ರೈತಸಂಘ #ಹಸಿರುಸೇನೆ #ಕರ್ನಾಟಕಬಂದ್

31/10/2026

ಆಲಮೇಲ ಬಂದ್‌ಗೆ ರೈತರ ಕರೆ: ಕಬ್ಬಿನ ದರ ನಿಗದಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ!

ಆಲಮೇಲ: ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ರೈತ ಸಂಘಟನೆಗಳ ನೇತೃತ್ವದಲ್ಲಿ ಆಲಮೇಲ ತಾಲ್ಲೂಕಿನಲ್ಲಿ ಬಂದ್ ಆಚರಿಸಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಸ್ಪಂದಿಸಿ ನ್ಯಾಯಯುತ ಕಬ್ಬಿನ ದರ ನಿಗದಿಪಡಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ರೈತರ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರದ ಗಮನ ಸೆಳೆದರು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಕರವೇ ಯುವ ಮುಖಂಡ ರವಿ ಬಂಡಗಾರ ಅವರು, ಕಬ್ಬು ಬೆಳೆಗಾರರ ಸಮಸ್ಯೆಗಳು ಹಾಗೂ ಕಬ್ಬಿನ ದರ ನಿಗದಿಯ ಅಗತ್ಯದ ಕುರಿತು ಮಾತನಾಡಿದರು.

#ಆಲಮೇಲ #ರೈತರಪ್ರತಿಭಟನೆ #ಕಬ್ಬಿನದರ #ರೈತಹೋರಾಟ #ಕಬ್ಬುಬೆಳೆಗಾರರು #ಆಲಮೇಲಬಂದ್ #ರವಿಬಂಡಗಾರ

Other Health/Beauty in Vijapur

Show All
  • AWPL business

    AWPL business

    Vijaypur Lakshmanpura, Vijapur

    health ke sath sath income earning karna

  • animal cemp

    animal cemp

    Kukarwada, Vijapur 382830

    WELCOME TO ANIMAL PLEASE

  • Ganga gagan wellness coach

    Ganga gagan wellness coach

    Khaja Ameena Darga Vijapur, Vijapur 586101

    I’m Sunitha prem wellness coach weight loss weight gain nutrition

  • JAY UMIYA Traders

    JAY UMIYA Traders

    KUKARWADA, Vijapur 384530

    કપાસ ખોળ, મકાઈ ભરડો�,મકાઈ પાપડી, તમામ પ્રકારના પશુ આહાર મળશે.

Alerts

Be the first to know and let us send you an email when NERA NUDI posts news and promotions. Your email address will not be used for any other purpose, and you can unsubscribe at any time.

Subscribe

We will notify you when anything happens in Vijapur.